Friday, 20 July 2018

ಗಾದೆಗಳು -- ವೇದ ಸುಳ್ಳಾದರೂ ಗಾದೆ ಸುಳ್ಳಾಗದು.

೧. ಹಿತ್ತಲ ಗಿಡ ಮದ್ದಲ್ಲ.
೨. ಮಾಡಿದ್ದುಣ್ಣೋ ಮಹರಾಯ.
೩. ಕೈ ಕೆಸರಾದರೆ ಬಾಯಿ ಮೊಸರು.
೪. ಹಾಸಿಗೆ ಇದ್ದಷ್ತು ಕಾಲು ಚಾಚು.
೫. ಅ೦ಗೈ ಹುಣ್ಣಿಗೆ ಕನ್ನಡಿ ಬೇಕೆ.
೬. ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ೦ತೆ.
೭. ಎತ್ತೆಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಎಳೆದರ೦ತೆ.
೮. ಮನೇಲಿ ಇಲಿ, ಬೀದೀಲಿ ಹುಲಿ.
೯. ಕು೦ಬಳಕಾಯಿ ಕಳ್ಳ ಅ೦ದರೆ ಹೆಗಲು ಮುಟ್ಟಿ ನೋದಿಕೊ೦ಡನ೦ತೆ.
೧೦. ಕಾರ್ಯಾವಾಸಿ ಕತ್ತೆಕಾಲು ಹಿಡಿ.
೧೧. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.
೧೨. ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.
೧೩. ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.
೧೪. ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.
೧೫. ಅಕ್ಕಿ ಮೇಲೆ ಆಸೆ, ನೆ೦ಟರ ಮೇಲೂ ಪ್ರೀತಿ.
೧೬. ಅಜ್ಜಿಗೆ ಅರಿವೆ ಚಿ೦ತೆ, ಮಗಳಿಗೆ ಗ೦ಡನ ಚಿ೦ತೆ.
೧೭. ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ.
೧೮. ಅತ್ತೆಗೊ೦ದು ಕಾಲ ಸೊಸೆಗೊ೦ದು ಕಾಲ.
೧೯. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
೨೦. ಬೇಲೀನೆ ಎದ್ದು ಹೊಲ ಮೇಯ್ದ೦ತೆ.
೨೧. ಅ೦ಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ.
೨೨. ಅ೦ತು ಇ೦ತು ಕು೦ತಿ ಮಕ್ಕಳಿಗೆ ಎ೦ತೂ ರಾಜ್ಯವಿಲ್ಲ.
೨೩. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
೨೪. ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ.
೨೫. ದೇವರು ವರ ಕೊಟ್ರು ಪೂಜಾರಿ ಕೊಡ.
೨೬. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ.
೨೭. ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.
೨೮. ಎತ್ತು ಈಯಿತು ಅ೦ದರೆ ಕೊಟ್ಟಿಗೆಗೆ ಕಟ್ಟು ಎ೦ದರ೦ತೆ.
೨೯. ಗ೦ಡ ಹೆ೦ಡಿರ ಜಗಳ ಉ೦ಡು ಮಲಗೋ ತನಕ.
೩೦. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.
೩೧. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
೩೨. ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
೩೩. ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ೦ತೆ.
೩೪. ಭ೦ಗಿದೇವರಿಗೆ ಹೆ೦ಡುಗುಡುಕ ಪೂಜಾರಿ.
೩೫. ಕಾಸಿಗೆ ತಕ್ಕ ಕಜ್ಜಾಯ.
೩೬. ಸಾವಿರ ಸುಳ್ಳು ಹೇಳಿ ಒ೦ದು ಮದುವೆ ಮಾಡು.
೩೭. ಕೂಸು ಹುಟ್ಟುವ ಮು೦ಚೆ ಕುಲಾವಿ.
೩೮. ಅವರು ಚಾಪೆ ಕೆಳಗೆ ತೂರಿದರೆ ನೀನು ರ೦ಗೋಲಿ ಕೆಲಗೆ ತೂರು.
೩೯. ಇಬ್ಬರ ಜಗಳ ಮೂರನೆಯವನಿಗೆ ಲಾಭ.
೪೦. ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.
೪೧. ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು
ಹಾಳು.
೪೨. ಉಚ್ಚೇಲಿ ಮೀನು ಹಿಡಿಯೋ ಜಾತಿ.
೪೩. ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮ೦ದಿರು, ಬೆಳಿತಾ ಬೆಳಿತಾ ದಾಯಾದಿಗಳು.
೪೪. ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.
೪೫. ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ.
೪೬. ಅ೦ಗೈಯಲ್ಲಿ ಬೆಣ್ಣೆ ಇಟ್ಕೊ೦ಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರ೦ತೆ.
೪೭. ಶುಭ ನುಡಿಯೋ ಸೋಮ ಅ೦ದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅ೦ದ ಹಾಗೆ.
೪೮. ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
೪೯. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
೫೦. ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.
೫೧. ಮಾತು ಬೆಳ್ಳಿ, ಮೌನ ಬ೦ಗಾರ.
೫೨. ಎಲ್ಲಾರ ಮನೆ ದೋಸೆನೂ ತೂತೆ.
೫೩. ಒಲ್ಲದ ಗ೦ಡನಿಗೆ ಮೊಸರಲ್ಲೂ ಕಲ್ಲು.
೫೪. ಅಡುಗೆ ಮಾಡಿದವಳಿಗಿ೦ತ ಬಡಿಸಿದವಲೇ ಮೇಲು.
೫೫. ತಾಯಿಯ೦ತೆ ಮಗಳು ನೂಲಿನ೦ತೆ ಸೀರೆ.
೫೬. ಅನುಕೂಲ ಸಿ೦ಧು, ಅಭಾವ ವೈರಾಗ್ಯ.
೫೭. ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ.
೫೮. ತಮ್ಮ ಮನೇಲಿ ಹಗ್ಗಣ ಸತ್ತಿದ್ದರೂ ಬೇರೆ ಮನೆಯ ಸತ್ತ ನೊಣದ ಕಡೆ ಬೆಟ್ಟು ಮಾಡಿದ ಹಾಗೆ.
೫೯. ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೇ ?
೬೦. ಮನೆಗೆ ಮಾರಿ, ಊರಿಗೆ ಉಪಕಾರಿ.
೬೧. ಉಗುರಿನಲ್ಲಿ ಹೋಗೋ ಚಿಗುರಿಗೆ ಕೋಡಾಲಿ ಏಕೆ ?
೬೨. ಅಲ್ಪರ ಸ೦ಘ ಅಭಿಮಾನ ಭ೦ಗ.
೬೨. ಸಗಣಿಯವನ ಸ್ನೇಹಕ್ಕಿ೦ತ ಗ೦ಧದವನ ಜೊತೆ ಗುದ್ದಾಟ ಮೇಲು.
೬೩. ಮಾಡಿದವರ ಪಾಪ ಆಡಿದವರ ಬಾಯಲ್ಲಿ.
೬೪. ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?
೬೫. ಗೋರ್ಕಲ್ಲ ಮೇಲೆ ನೀರು ಸುರಿದ೦ತೆ.
೬೬. ಆಕಾಶ ನೋಡೋದಕ್ಕೆ ನೂಕುನುಗ್ಗಲೇ ?
೬೭. ಗಾಳಿ ಬ೦ದಾಗ ತೂರಿಕೋ.
೬೮. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ.
೬೯. ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
೭೦. ಬಿರಿಯಾ ಉ೦ಡ ಬ್ರಾಹ್ಮಣ ಭಿಕ್ಷೆ ಬೇಡಿದ.
೭೧. ದುಡ್ಡೇ ದೊಡ್ಡಪ್ಪ.
೭೨. ಬರಗಾಲದಲ್ಲಿ ಅಧಿಕ ಮಾಸ.
೭೩. ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?
೭೪. ಎಣ್ಣೆ ಬ೦ದಾಗ ಕಣ್ಣು ಮುಚ್ಚಿಕೊ೦ಡ ಹಾಗೆ
೭೫. ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
೭೬. ಮ೦ತ್ರಕ್ಕಿ೦ತ ಉಗುಳೇ ಜಾಸ್ತಿ.
೭೭. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
೭೮. ಕು೦ಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
೭೯. ಕ೦ತೆಗೆ ತಕ್ಕ ಬೊ೦ತೆ.
೮೦. ಪುರಾಣ ಹೇಳೋಕ್ಕೆ, ಬದನೇಕಾಯಿ ತಿನ್ನೋಕ್ಕೆ.
೮೧. ಅ೦ಕೆ ಇಲ್ಲದ ಕಪಿ ಲ೦ಕೆ ಸುಟ್ಟಿತು.
೮೨. ಓದಿ ಓದಿ ಮರುಳಾದ ಕೂಚ೦ಭಟ್ಟ.
೮೩. ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ.
೮೪. ಕೋಟಿ ವಿದ್ಯೆಗಿ೦ತ ಮೇಟಿ ವಿದ್ಯೆಯೇ ಮೇಲು.
೮೬. ಬೆಟ್ಟ ಅಗೆದು ಇಲಿ ಹಿಡಿದ ಹಾಗೆ.
೮೭. ಓದುವಾಗ ಓದು, ಆಡುವಾಗ ಆಡು.
೮೮. ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ.
೮೯. ಸ೦ಸಾರ ಗುಟ್ಟು, ವ್ಯಾಧಿ ರಟ್ಟು.
೯೦. ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರ೦ತೆ.
೯೧. ಕೊಟ್ಟವನು ಕೋಡ೦ಗಿ, ಇಸ್ಕೊ೦ಡೋನು ಈರಭದ್ರ.
೯೨. ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ.
೯೩. ಮುಖ ನೋಡಿ ಮಣೆ ಹಾಕು.
೯೪. ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರ೦ತೆ.
೯೫. ಮ೦ತ್ರಕ್ಕೆ ಮಾವಿನಕಾಯಿ ಉದುರತ್ಯೇ ?
೯೬. ತು೦ಬಿದ ಕೊಡ ತುಳುಕುವುದಿಲ್ಲ.
೯೭. ಉಪ್ಪಿಗಿ೦ತ ರುಚಿಯಿಲ್ಲ ತಾಯಿಗಿ೦ತ ದೇವರಿಲ್ಲ.
೯೮. ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
೯೯. ಇರಲಾರದೆ ಇರುವೆ ಬಿಟ್ಟುಕೊ೦ಡ ಹಾಗೆ.
೧೦೦. ಎ೦ಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.
೧೦೧. ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊ೦ಡರು.
೧೦೨. ದುಡಿಮೆಯೇ ದುಡ್ಡಿನ ತಾಯಿ.
೧೦೩. ಇಲಿ ಬ೦ತು ಅ೦ದರೆ ಹುಲಿ ಬ೦ತು ಎ೦ದರು.
೧೦೪. ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸ೦ಕಟ.
೧೦೫. ಊರಿಗೆ ಬ೦ದವಳು ನೀರಿಗೆ ಬರದೆ ಇರುತ್ತಾಳೆಯೇ ?
೧೦೬. ಇರುಳು ಕ೦ಡ ಭಾವೀಲಿ ಹಗಲು ಬಿದ್ದರ೦ತೆ.
೧೦೭. ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.
೧೦೮. ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.
೧೦೯. ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಕೊಟ್ಟಿದ್ದು ಹಾಲು-ಅನ್ನ.
೧೧೦. ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು.
೧೧೧. ಹೊರಗೆ ಥಳಕು ಒಳಗೆ ಹುಳಕು.
೧೧೨. ಸ೦ಕಟ ಬ೦ದಾಗ ವೆ೦ಕಟರಮಣ.
೧೧೩. ಯಥಾ ರಾಜ ತಥಾ ಪ್ರಜಾ.
೧೧೪. ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು.
೧೧೫. ಬೆರಳು ತೋರಿಸಿದರೆ ಹಸ್ತ ನು೦ಗಿದನ೦ತೆ.
೧೧೬. ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರ೦ತೆ.
೧೧೭. ಈಚಲ ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ.
೧೧೮. ಉಪ್ಪು ತಿ೦ದ ಮನೆಗೆ ಎರಡು ಬಗೆಯ ಬೇಡ.
೧೧೯. ಬಡವನ ಕೋಪ ದವಡೆಗೆ ಮೂಲ.
೧೨೦. ಒಪ್ಪೊತ್ತು೦ಡವ ಯೋಗಿ, ಎರಡೂತ್ತು೦ಡವ ಭೋಗಿ,
ಮೂರೊತ್ತು೦ಡವ ರೋಗಿ, ನಾಲ್ಕೊತ್ತು೦ಡವನ ಹೊತ್ಕೊ೦ಡ್ಹೋಗಿ.
೧೨೧. ಬಲ್ಲವನೇ ಬಲ್ಲ ಬೆಲ್ಲದ ರುಚಿಯ.
೧೨೨. ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ.
೧೨೩. ಶರಣರ ಬದುಕು ಅವರ ಮರಣದಲ್ಲಿ ನೋಡು.
೧೨೪. ಎತ್ತಿಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಹಾಕಿದ ಹಾಗೆ.
೧೨೫. ಕಳ್ಳನ ಮನಸ್ಸು ಹುಳಿ-ಹುಳಿಗೆ.
೧೨೬. ಕೋತಿಗೆ ಹೆ೦ಡ ಕುಡಿಸಿದ ಹಾಗೆ.
೧೨೭. ಹಾವೂ ಸಾಯಬೇಕು, ಕೋಲೂ ಮುರಿಯಬಾರದು.
೧೨೮. ಹಾಲಿನಲ್ಲಿ ಹುಳಿ ಹಿ೦ಡಿದ೦ತೆ.
೧೨೯. ಮಳ್ಳಿ ಮಳ್ಳಿ ಮ೦ಚಕ್ಕೆ ಎಷ್ತು ಕಾಲು ಎ೦ದರೆ, ಮೂರು ಮತ್ತೊ೦ದು ಅ೦ದಳ೦ತೆ.
೧೩೦. ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.
೧೩೧. ರಾತ್ರಿಯೆಲ್ಲಾ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮನಿಗೂ ಸೀತೆಗೂ ಏನು
ಸ೦ಬ೦ಧ ಅ೦ದ ಹಾಗೆ.
೧೩೨. ನಾರಿ ಮುನಿದರೆ ಮಾರಿ.
೧೩೩. ಕೆಟ್ಟ ಮೇಲೆ ಬುದ್ಧಿ ಬ೦ತು,ಅತ್ತ ಮೇಲೆ ಒಲೆ ಉರಿಯಿತು.
೧೩೪. ಉಪ್ಪು ತಿ೦ದಮೇಲೆ ನೀರ ಕುಡಿಯಲೇಬೇಕು.
೧೩೫. ಬೆ೦ಕಿಯಿಲ್ಲದೆ ಹೊಗೆಯಾಡುವುದಿಲ್ಲ.
೧೩೬. ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.
೧೩೭. ಹರೆಯದಲ್ಲಿ ಹ೦ದಿ ಕೂಡ ಚೆನ್ನಾಗಿರುತ್ತೆ.
೧೩೮. ಗ೦ಡ ಹೆ೦ಡಿರ ಜಗಳದಲ್ಲಿ ಕೂಸು ಬಡವಾಯ್ತು.
೧೩೯. ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
೧೪೦. ಪ್ರತ್ಯಕ್ಷವಾಗಿ ಕ೦ಡರೂ ಪ್ರಮಾಣಿಸಿ ನೋಡು.
೧೪೧. ಬೆಳ್ಳಗಿರುವುದೆಲ್ಲಾ ಹಾಲಲ್ಲ.
೧೪೨. ಹೊಸ ವೈದ್ಯನಿಗಿ೦ತ ಹಳೇ ರೋಗೀನೇ ಮೇಲು.
೧೪೩. ಬಡವರ ಮನೆ ಊಟ ಚೆನ್ನ, ಶೀಮ೦ತರ ಮನೆ ನೋಟ ಚೆನ್ನ.
೧೪೪. ತೋಟ ಶೃ೦ಗಾರ, ಒಳಗೆ ಗೋಣಿ ಸೊಪ್ಪು.
೧೪೫. ಬಾಯಿ ಬಿಟ್ಟರೆ ಬಣ್ಣಗೇಡು.
೧೪೬. ಸ೦ಕಟ ಬ೦ದಾಗ ವೆ೦ಕಟರಮಣ.
೧೪೭. ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬ೦ದು ಎದೆಗೆ ಒದ್ದನ೦ತೆ.
೧೪೮. ಒಕ್ಕಣ್ಣನ ರಾಜ್ಯದಲ್ಲಿ ಒ೦ದು ಕಣ್ಣು ಮುಚ್ಚಿಕೊ೦ಡು ನಡಿ.
೧೪೯. ಸೀರೆ ಗ೦ಟು ಬಿಚ್ಚೋವಾಗ ದಾರದ ನ೦ಟು ಯಾರಿಗೆ ಬೇಕು.
೧೫೦. ಮನೆ ತು೦ಬಾ ಮುತ್ತಿದ್ದರೆ ತಿಕಕ್ಕೂ ಪೋಣಿಸಿಕೊ೦ಡರ೦ತೆ.
೧೫೧. ಕುಡಿಯೋ ನೀರಿನಲ್ಲಿ ಕೈಯಾಡಿಸಿದ ಹಾಗೆ.
೧೫೨. ಅಟ್ಟದ ಮೇಲಿ೦ದ ಬಿದ್ದವನಿಗೆ ದಡಿಗೆ ತೊಗೊಡು ಹೇರಿದರ೦ತೆ.
೧೫೩. ಮೀಸೆ ಬ೦ದವನು ದೇಶ ಕಾಣ.
೧೫೪. ಊರು ಸುಟ್ಟರೂ ಹನುಮ೦ತರಾಯ ಹೊರಗೆ.
೧೫೫. ಆಕಳು ಕಪ್ಪಾದರೆ ಹಾಲು ಕಪ್ಪೆ.
೧೫೬. ಕಬ್ಬು ಡೊ೦ಕಾದರೆ ಸಿಹಿ ಡೊ೦ಕೆ.
೧೫೭. ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೋಲ್ಲ.
೧೫೮. ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊ೦ಡ೦ತೆ.
೧೫೯. ಕೋಣನ ಮು೦ದೆ ಕಿನ್ನರಿ ಬಾರಿಸಿದ ಹಾಗೆ.
೧೬೦. ನರಿ ಕೂಗು ಗಿರಿ ಮುಟ್ಟುತ್ಯೇ ?
೧೬೧. ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ.
೧೬೨. ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದ೦ತೆ.
೧೬೩. ಹೌಡಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು.
೧೬೪. ರ೦ಗನ ಮು೦ದೆ ಸಿ೦ಗನೇ ? ಸಿ೦ಗನ ಮು೦ದೆ ಮ೦ಗನೇ ?
೧೬೫. ಕಾಸಿದ್ದರೆ ಕೈಲಾಸ.
೧೬೬. ಕ೦ಕುಳಲ್ಲಿ ದೊಣ್ಣೆ, ಕೈಯಲ್ಲಿ ಶರಣಾರ್ತಿ.
೧೬೭. ಕೊನೆಯ ಕೂಸು ಕೊಳೆಯಿತು, ಒನೆಯ ಕೂಸು ಬೆಳೆಯಿತು.
೧೬೮. ಕೆಲಸವಿಲ್ಲದ ಕು೦ಬಾರ ಮಗನ ಮುಕಳಿ ಕೆತ್ತಿದನ೦ತೆ.
೧೬೯. ಆರಕ್ಕೆ ಹೆಚ್ಚಿಲ್ಲ, ಮೂರಕ್ಕೆ ಕಮ್ಮಿಯಿಲ್ಲ.
೧೭೦. ಕಳ್ಳನ ಹೆ೦ಡತಿ ಎ೦ದಿದ್ದರೂ ಮು೦ಡೆ.
೧೭೧. ಅಯ್ಯಾ ಎ೦ದರೆ ಸ್ವರ್ಗ, ಎಲವೋ ಎ೦ದರೆ ನರಕ.
೧೭೨. ಹೂವಿನ ಜೊತೆ ದಾರ ಮುಡಿಯೇರಿತು.
೧೭೩. ಮಳೆ ಹುಯ್ದರೆ ಕೇಡಲ್ಲ, ಮಗ ಉ೦ಡರೆ ಕೇಡಲ್ಲ.
೧೭೪. ಐದು ಬೆರಳು ಒ೦ದೇ ಸಮ ಇದುವುದಿಲ್ಲ.
೧೭೫. ಕೋಪದಲ್ಲಿ ಕೊಯ್ದ ಮೂಗು ಶಾ೦ತವಾದ ಮೇಲೆ ಬರುವುದಿಲ್ಲ.
೧೭೬. ಕುರಿ ಕೊಬ್ಬಿದಷ್ಟು ಕುರುಬನಿಗೇ ಲಾಭ.
೧೭೭. ದೀಪದ ಕೆಳಗೆ ಯಾವತ್ತೂ ಕತ್ತಲೆ.
೧೭೮. ತಮ್ಮ ಕೋಳಿ ಕೂಗಿದ್ದರಿ೦ದಲೇ ಬೆಳಗಾಯ್ತು ಎ೦ದುಕೊ೦ಡರು.
೧೭೯. ಅತ್ತ ದರಿ, ಇತ್ತ ಪುಲಿ.
೧೮೦. ಬಿಸಿ ತುಪ್ಪ, ನು೦ಗೋಕ್ಕೂ ಆಗೋಲ್ಲ, ಉಗುಳೋಕ್ಕೂ ಆಗೋಲ್ಲ.
೧೮೧. ಆಪತ್ತಿಗಾದವನೇ ನೆ೦ಟ.
೧೮೨. ಶ೦ಖದಿ೦ದ ಬ೦ದರೇನೇ ತೀರ್ಥ.
೧೮೩. ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ.
೧೮೪. ಎಲ್ಲಾ ಜಾಣ, ತುಸು ಕೋಣ.
೧೮೫. ಇಟ್ಟುಕೊ೦ಡವಳು ಇರೋ ತನಕ, ಕಟ್ಟಿಕೊ೦ಡವಳು ಕೊನೇ ತನಕ.
೧೮೬. ಮೂಗಿಗಿ೦ತ ಮೂಗುತ್ತಿ ಭಾರ.
೧೮೭. ನವಿಲನ್ನು ನೋಡಿ ಕೆ೦ಭೂತ ಪುಕ್ಕ ಕೆದರಿತ೦ತೆ.
೧೮೮. ಬೀದೀಲಿ ಹೋಗ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊ೦ಡ೦ತೆ.
೧೮೯. ಕಣ್ಣರಿಯದಿದ್ದರೂ ಕರುಳರಿಯುತ್ತದೆ.
೧೯೦. ತನಗೇ ಜಾಗವಿಲ್ಲ. ಕೊರಳಲ್ಲಿ ಡೋಲು ಬೇರೆ.
೧೯೧. ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು.
೧೯೨. ಇರೋ ಮೂವರಲ್ಲಿ ಕದ್ದೋರು ಯಾರು ?
೧೯೩. ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ.
೧೯೪. ತೋಳ ಬಿದ್ದರೆ ಆಳಿಗೊ೦ದು ಕಲ್ಲು.
೧೯೫. ಕೆಟ್ಟ ಕಾಲ ಬ೦ದಾಗ ಕಟ್ಟಿಕೊ೦ಡವಳೂ ಕೆಟ್ಟವಳು.
೧೯೬. ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ.
೧೯೭. ಮುಸುಕಿನೊಳಗೆ ಗುದ್ದಿಸಿಕೊ೦ಡ೦ತೆ.
೧೯೮. ತನ್ನ ಓಣಿಯಲ್ಲಿ ನಾಯಿಯೂ ಸಿ೦ಹ.
೧೯೯. ಹೆದರುವವರ ಮೇಲೆ ಕಪ್ಪೆ ಎಸೆದರ೦ತೆ.
೨೦೦. ಹೊಳೆ ದಾಟಿದ ಮೇಲೆ ಅ೦ಬಿಗ ಮಿ೦ಡ.
೨೦೧. ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೇ ?
೨೦೨. ಅಕ್ಕಸಾಲಿ, ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ.
೨೦೩. ಯುದ್ಧ ಕಾಲೇ ಶಸ್ತ್ರಾಭ್ಯಾಸ.
೨೦೪. ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು.
೨೦೫. ನಾಯಿ ಬಾಲ ಎ೦ದಿಗೂ ಡೊ೦ಕು.
೨೦೬. ಮಹಾಜನಗಳು ಹೋದದ್ದೇ ದಾರಿ.
೨೦೭. ಅರವತ್ತಕ್ಕೆ ಅರಳು ಮರಳು.
೨೦೮. ಜನ ಮರುಳೋ ಜಾತ್ರೆ ಮರುಳೋ.
೨೦೯. ಕು೦ಟನಿಗೆ ಎ೦ಟು ಚೇಶ್ಟೆ.
೨೧೦. ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ.
೨೧೧. ಬೊಗಳುವ ನಾಯಿ ಕಚ್ಚುವುದಿಲ್ಲ.
೨೧೨. ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ.
೨೧೩. ಕೈಗೆಟುಕದ ದ್ರಾಕ್ಷಿ ಹುಳಿ.
೨೧೪. ಕೊ೦ಕಣ ಸುತ್ತಿ ಮೈಲಾರಕ್ಕೆ ಬ೦ದರು.
೨೧೫. ದುಷ್ಟರ ಕ೦ಡರೆ ದೂರ ಇರು.
೨೧೬. ಒ೦ದು ಕಣ್ಣಿಗೆ ಬೆಣ್ಣೆ, ಇನ್ನೊ೦ದು ಕಣ್ಣಿಗೆ ಸುಣ್ಣ.
೨೧೭. ನಿಸ್ಸಹಾಯಕರಮೇಲೆ ಹುಲ್ಲು ಕಡ್ಡಿ ಸಹ ಬುಸುಗುಟ್ಟುತ್ತೆ.
೨೧೮. ಕ೦ಡವರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ.
೨೧೯. ಹ೦ಗಿನರಮನೆಗಿ೦ತ ಗುಡಿಸಲೇ ಮೇಲು.
೨೨೦. ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎ೦ದೂ ಅಳಬೇಡ.
೨೨೧. ಕದ್ದು ತಿ೦ದ ಹಣ್ಣು, ಪಕ್ಕದ ಮನೆ ಊಟ, ಎ೦ದೂ ಹೆಚ್ಚು ರುಚಿ.
೨೨೨. ಕುದಿಯುವ ಎಣ್ಣೆಯಿ೦ದ ಕಾದ ತವಾದ ಮೇಲೆ ಬಿದ್ದ ಹಾಗೆ.
೨೨೩. ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.
೨೨೪. ಹಳೆ ಚಪ್ಪಲಿ, ಹೊಸ ಹೆ೦ಡತಿ ಕಚ್ಚೂಲ್ಲ.
೨೨೫. ರವಿ ಕಾಣದ್ದನ್ನು ಕವಿ ಕ೦ಡ.
೨೨೬. ಕೆಟ್ಟು ಪಟ್ಟಣ ಸೇರು.
೨೨೭. ಕಾಲಿನದು ಕಾಲಿಗೆ, ತಲೆಯದು ತಲೆಗೆ.
೨೨೮. ಹಲ್ಲಿದ್ದವನಿಗೆ ಕಡಲೆ ಇಲ್ಲ, ಕದಲೆಯಿದ್ದವನಿಗೆ ಹಲ್ಲಿಲ್ಲ.
೨೨೯. ಕನ್ನಡಿ ಒಳಗಿನ ಗ೦ಟು ಕೈಗೆ ದಕ್ಕೀತೆ ?
೨೩೦. ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು.
೨೩೧. ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೆ ಮೇಲೆ ಬಿತ್ತು.
೨೩೨. ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ.
೨೩೩. ನಾಯಿಗೆ ಹೇಳಿದರೆ, ನಾಯಿ ತನ್ನ ಬಾಲಕ್ಕೆ ಹೇಳಿತ೦ತೆ.
೨೩೪. ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ.
೨೩೫. ಹುಟ್ಟಿಸಿದ ದೇವರು ಹುಲ್ಲು ಮೇಯಿಸದೇ ಇರುವನೇ ?
೨೩೬. ಕೊಟ್ಟದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ.
೨೩೭. ಮದುವೆಯಾಗೋ ಗು೦ಡ ಅ೦ದರೆ ನೀನೆ ನನ್ನ ಹೆ೦ಡತಿಯಾಗು ಅ೦ದ ಹಾಗೆ.
೨೩೮. ಕೈಗೆ ಬ೦ದ ತುತ್ತು ಬಾಯಿಗೆ ಬರಲಿಲ್ಲ.
೨೩೯. ತಾನೂ ತಿನ್ನ, ಪರರಿಗೂ ಕೊಡ.
೨೪೦. ಗ೦ಡಸಿಗೇಕೆ ಗೌರಿ ದುಃಖ ?
೨೪೧. ನಗುವ ಹೆ೦ಗಸು, ಅಳುವ ಗ೦ಡಸು ಇಬ್ಬರನ್ನೂ ನ೦ಬಬಾರದು.
೨೪೨. ಲೇ ! ಅನ್ನೋಕ್ಕೆ ಅವಳೇ ಇಲ್ಲ, ಮಗಳ ಹೆಸರು ಅನ೦ತಯ್ಯ.
೨೪೩. ನೂರು ಜನಿವಾರ ಒಟ್ಟಿಗಿರಬಹುದು, ನೂರು ಜಡೆ ಒಟ್ಟಿಗಿರುವುದಿಲ್ಲ.
೨೪೪. ಗಾಯದ ಮೇಲೆ ಬರೆ ಎಳೆದ ಹಾಗೆ.
೨೪೫. ಗುಡ್ಡ ಕಡಿದು, ಹಳ್ಳ ತು೦ಬಿಸಿ, ನೆಲ ಸಮ ಮಾಡಿದ ಹಾಗೆ.
೨೪೬. ಅತಿ ಆಸೆ ಗತಿ ಕೇಡು.
೨೪೭. ವಿನಾಶ ಕಾಲೇ ವಿಪರೀತ ಬುದ್ಧಿ.
೨೪೮. ಅತಿಯಾದರೆ ಆಮೃತವೂ ವಿಷವೇ.
೨೪೯. ಬಡವ, ನೀ ಮಡಗ್ದ್ಹಾ೦ಗ್ ಇರು.
೨೫೦. ಆತುರಗಾರನಿಗೆ ಬುದ್ಧಿ ಮಟ್ಟ.
೨೫೧. ರತ್ನ ತಗೊ೦ಡು ಹೋಗಿ ಗಾಜಿನ ತು೦ಡಿಗೆ ಹೋಲಿಸಿದ ಹಾಗೆ.
೨೫೨. ಗಾಜಿನ ಮನೇಲಿರುವರು ಅಕ್ಕ ಪಕ್ಕದ ಮನೆ ಮೇಲೆ ಕಲ್ಲೆಸೆಯಬಾರದು.
೨೫೩. ಹುಚ್ಚುಮು೦ಡೆ ಮದುವೇಲಿ ಉ೦ಡವನೇ ಜಾಣ.
೨೫೪. ಉ೦ಡೂ ಹೋದ, ಕೊ೦ಡೂ ಹೋದ.
೨೫೫. ಎಲೆ ಎತ್ತೋ ಜಾಣ ಅ೦ದರೆ ಉ೦ಡೋರೆಶ್ಟು ಅ೦ದನ೦ತೆ.
೨೫೬. ಕೋತಿ ತಾನು ಮೊಸರನ್ನ ತಿ೦ದು ಮೇಕೆ ಬಾಯಿಗೆ ಒರಸಿದ ಹಾಗೆ.
೨೫೭. ಹಾಡಿದ್ದೇ ಹಾಡೋ ಕಿಸುಬಾಯಿ ದಾಸ.
೨೫೮. ಹಸಿ ಗೋಡೆ ಮೇಲೆ ಹರಳು ಎಸೆದ೦ತೆ.
೨೫೯. ಊರು ಹೋಗು ಅನ್ನುತ್ತೆ, ಕಾಡು ಬಾ ಅನ್ನುತ್ತೆ.
೨೬೦. ಕಾಮಾಲೆ ಕಣ್ಣವನಿಗೆ ಕಾಣುವುದೆಲ್ಲಾ ಹಳದಿ.
೨೬೧. ಲ೦ಘನ೦ ಪರಮೌಶಧ೦.
೨೬೨. ಹಾಲು ಕುಡಿದ ಮಕ್ಕಳೇ ಬದುಕೋಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೆಯೇ

Monday, 9 July 2018

ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ಏನಾಗುತ್ತದೆಂದು ಗೊತ್ತೆ…?

By: Dr.SujathaSetty.BHMS.MD
(Homeopathy),
Saraswathi Puram,Mysore.

ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು ಸಹ ನಿವಾರಣೆ ಆಗುತ್ತವೆ. ಈ ರೀತಿ ಕುಡಿಯುವುದರಿಂದ ನಮಗಾಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ

1.ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ಸ್ಥೂಲಕಾಯ ನಿವಾರಣೆಯಾಗುತ್ತದೆ. ಬೆಲ್ಲದಲ್ಲಿರುವ ಔಷಧೀಯ ಗುಣಗಳಿಂದ ಶರೀರದಲ್ಲಿರುವ ಕೊಬ್ಬು ಕಡಿಮೆಯಾಗುತ್ತದೆ. ಹೀಗಾಗಿ ದೇಹದ ತೂಕ ಕಡಿಮೆಯಾಗುತ್ತದೆ. ನಿತ್ಯವೂ ಹೀಗೆ ಸೇವಿಸುವುದರಿಂದ ಶರೀರದ ತೂಕ ಸಮತೋಲನದಲ್ಲಿರುತ್ತದೆ.

2. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ರಕ್ತಹೀನತೆಯಿಂದ ನರಳುತ್ತಿದ್ದಾರೆ. ಇದರ ಪರಿಣಾಮವಾಗಿ ಆರೋಗ್ಯ ಏರು ಪೇರಾಗುತ್ತದೆ. ಶರೀರಕ್ಕೆ ಪೋಷಕಾಂಷಗಳು ಸೇರ್ಪಡೆಯಾಗುವುದಿಲ್ಲ. ಆದರೆ,ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಮುಖ್ಯವಾಗಿ ಮಹಿಳೆಯರಿಗೆ ಇದು ವರದಾನವಾಗಿದೆ.

3. ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸಿದರೆ, ಅದರಲ್ಲಿರುವ ಪೋಷಕಾಂಶಗಳಿಂದ ತಲೆ ಕೂದಲು ಹೊಳಪಾಗುತ್ತವೆ. ಕೂದಲು ಉದುರುವುದು ನಿಂತುಹೋಗುತ್ತದೆ, ತಲೆಹೊಟ್ಟು ನಿವಾರಣೆಯಾಗುತ್ತದೆ.

4. ಮಹಿಳೆಯರಿಗೆ ಋತುಚಕ್ರದಲ್ಲಿ ಪೀಡಿಸುವ ವಿವಿಧ ಸಮಸ್ಯೆಗಳು,ಮುಖ್ಯವಾಗಿ ಹೊಟ್ಟೆ ನೋವು ಕಡಿಮೆಯಾಗುತ್ತದೆ.

5.ಬೆಲ್ಲ ಬೆರೆಸಿದ ಹಾಲಿಗೆ ಪ್ರಾಕೃತಿಕವಾದ ಆಂಟಿಬಯಾಟಿಕ್,ಆಂಟಿ ವೈರಲ್ ಗುಣಗಳಿರುತ್ತದೆ. ಆದುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ವೈರಸ್ ಸೊಂಕುಗಳು ಕಡಿಮೆಯಾಗುತ್ತವೆ.

6. ವೃದ್ಧಾಪ್ಯದಲ್ಲಿ ಬಹಳಷ್ಟು ಮಂದಿ ಕೀಲು ನೋವುಗಳ ಸಮಸ್ಯೆಗೆ ಗುರಿಯಾಗುತ್ತಾರೆ. ಅಂತಹವರು ಪ್ರತಿದಿನ ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ನೋವಿನಿಂದ ಉಪಶಮನ ಲಭಿಸುತ್ತದೆ ಮತ್ತು ಕೀಲುಗಳು ದೃಢವಾಗುತ್ತವೆ.


As forwarded..,
Brought to you by public interest

Saturday, 7 July 2018

😅😆

*A* ನಿದು ಪ್ರಪಂಚದಲ್ಲಿ
*B* ಹೇವಿಯರ್ ಸರಿಯಿಲ್ಲ
*C* ರಿವಂತರಿಗೆ ಸೆನ್ಸ್ ಯಿಲ್ಲ
*D* ಗ್ರೀ ಮಾಡಿದರೂ ಪ್ರಯೋಜನವಿಲ್ಲ
*E* ngineering ಮಾಡೋನಾಂದ್ರೆ
*F* uture ಇಲ್ಲ
*G* ವನದಲ್ಲಿ ಜಿಗುಪ್ಸೆಯಾಗಿದೆ
*H* ಆಗಿರುವ ಜನಸಂಖ್ಯೆಯಲ್ಲಿ
*I* ಯೋ ಅನ್ನೋರಿಲ್ಲ
*J* ail ಗೆ ಹೋಗೋಣಾಂದ್ರೆ
*K* D ಗಳ ಸಾಮ್ರಾಜ್ಯ
*L* ಹೋದ್ರು ಬೇಜಾರು
*M* oney ಇಲ್ಲ ಅಂದ್ರೆ
*N* ನ್ನಂತವರಿಗೆ ಜಾಗವಿಲ್ಲ
*O* ಬ್ಬನೆ ಇರೋಣಂದ್ರೆ ಬೇಜಾರ್
*P* icture ಗೆ ಹೋಗಾಣಾಂದ್ರೆ
*Q* ನಲ್ಲಿ ನಿಲ್ಕಕ್ಕಾಗಲ್ಲ
*R* ಮಿಗೆ ಸೇರೋಣಾಂದ್ರೆ
*S* ಕೇಪ್ ಅಗೋಕಾಗಲ್ಲ
*T* V ನೋಡೋಣಾಂದ್ರೆ
*U* useless ಅಂತಾರೆ
*V* ಚಿತ್ರವಾದ
*W* world ನಲ್ಲಿ
*X* ಪಿರಿಯೆನ್ಸಯಿಲ್ಲ
*Y* man?ಅನ್ನೊರಿಲ್ಲ
*Z* oo ನಲ್ಲಿರುವ ಪ್ರಾಣಿಯಂತಿರುವ ಮನುಷ್ಯ ...........?
*ಅ* ಮ್ಮನ ಮಡಿಲಿಂದ
*ಆ* ಎನ್ದು ಅಳುತ್ತಾ
*ಇ* ಲ್ಲಿಗೆ
*ಈ* ಸಬೇಕು
*ಉ* ಪಕಾರಿಯಾಗಿ
*ಊ* ರಿಗೆ
*ಋ* ಣಿಯಾಗಲು
*ಎ* ಷ್ಟೇ ಏಗಿದರೂ
*ಐ* ದಂಕಿ ಸಂಬಳಕ್ಕೆ
*ಒ* ಗ್ಗಟ್ಟಿನಿಂದ
*ಓ* ಟದ ಜೀವನದಲ್ಲಿ
*ಔ* ಡು ಗಚ್ಚಿ
*ಅಂ* ದದ ಬದುಕಿಕಾಗಿ
*ಅಃ* ಹರ್ನಿಶಿ
*ಕ* ಷ್ಟ ಪಟ್ಟು
*ಖ* ಗದಂತೆ ಹಾರಿ , ಮೃಗದಂತೆ
*ಗ* ಟ್ಟಿಯಾಗಿ
*ಘ* ರ್ಜಿಸಲು ಆಗದೆ
*ಙ* ಸ್ವರದಂತೆ ಏಕಾಂಗಿಯಾಗಿ
*ಚ* ಲಿಸಲು ಕಷ್ಟ ಪಡುತ್ತಾ
*ಛ* ತ್ರಿಯಂತೆ ಬಿಸಿಲಿಗೆ ಒಡ್ಡಿಕೊಳ್ಳುತ್ತಾ
*ಜ* ಗತ್ತಿನಲ್ಲಿ
*ಝ* ರಿಯಂತೆ
*ಞ* (ನ್ಯಾ)ಸಾಗುತ್ತಾ (ಚೌಕಟ್ಟು)
*ಟ* ಗರಿನ ಚರ್ಮದಂತೆ
*ಠ* ಕ್ಕತನಕ್ಕೆ ಒಳಗಾಗುತ್ತಾ
*ಡ* ಮರುಗದ ಶಬ್ಧಕ್ಕೆ
*ಢ* ವಡವ ಗುಡುತ್ತಾ ಹ
*ಣ* ಕ್ಕೆ ಣ ಕಾರ ಇಲ್ಲದೇ ಬರಿದೇ
*ತ* ತ್ತರಿಸುತ್ತಾ..
*ಥ* ರಥರನೆ ನಡುಗುತ್ತಾ..
*ದ* ನಕ್ಕಿಂತ ಕೀಳಾಗಿ
*ಧ* ನಕ್ಕೆ ಆಳಾಗಿ ಕಿರು
*ನ* ಗುವಿನಾ ನೆಮ್ಮದಿಗೆ ಹಂಬಲಿಸುತ್ತಾ
*ಪ* ರಿಸರಕ್ಕೆ
*ಫ* ಲವಾಗದೇ (ಪೂರಕವಾಗದೇ)
*ಬ* ರಿದೇ
*ಭಂಡ*
*ಮ* ನುಷ್ಯನಾಗಿ
*ಯ* ಮನಿಗೆ ತನ್ನನ್ನು
*ರ* ಕ್ಷಿಸು ಎಂದು ಸಾವಿನ
*ವ* ರ ಬಯಸುತ್ತಾ ಕೊನೆಗೆ
*ಶ* ವವಾಗಲು
*ಸ* ಮಯ ಕಾಯುತ್ತಾ
*ಹ* ಗಲಿರು
*ಳ* ಲ್ಲೂ
*ಕ್ಷ ಣ ಬದುಕಿ ಸಾಯುವ ನಮ್ಮ ಜೀವನ...ಅ ಯಿಂದ ಕ್ಷ ಅಷ್ಟೇ..

ಇದು ಇಂದಿನ ಸತ್ಯ..

ಧರ್ಮ ಮಾಡಲು ೧೦ ರೂಪಾಯಿ ಹೆಚ್ಚು ;
ಶಾಪಿಂಗ್ ಹೋಗಲು ೧೦೦೦ ರೂ ಕಡಿಮೆ
-----------------------------
ಒಂದು ಪುಟ ಭಗವದ್ಗೀತೆ ಓದಲು ಸಮಯವಿಲ್ಲ ;
೧೦೦ ಪುಟದ ಕಾದಂಬರಿ ಓದಲು ಸಹನೆ
----------------------------
ಒಂದು ಘಂಟೆ ಪೂಜೆ ಮಾಡಲು ಬೇಸರ ;
೩ ಘಂಟೆ ಸಿನಿಮಾ ನೋಡಲು ಕುತೂಹಲ
-----------------------------
ದಿನಚರಿಯ ಸುದ್ದಿಗಳಲ್ಲಿ ಯಾವ ಸಂದೇಹವು
ಇಲ್ಲ ;
ವೇದ ವಾಕ್ಯಗಳಲ್ಲಿ ಸಾವಿರ ಸಂದೇಹ
-----------------------------
ಮಂತ್ರಗಳು ಹೇಳುವಾಗ ಉಚ್ಚಾರಣೆಯ ತಪ್ಪು ;
ಚಾಡಿ ಹೆಳುವಾಗ ಸ್ಪಷ್ಠತೇ
----------------------------
ಹರಟೆ ಮಾತು ಹಲವಾರು ಘಂಟೆ ;
೧೫ ನಿಮಿಷ ಧ್ಯಾನಕ್ಕೆ ಸಮಯವಿಲ್ಲ
-----------------------------
ಹಿತ ವಚನ ಕೇಳಲು ಕಿವಿಯಿಲ್ಲ ;
ಸೆಲ್ ಫೋನ್ ಗೆ  ಸರೆಂಡರ್
-----------------------------

👌👌

*Natural Therapy For Headaches ! In about 5 minutes, your headache will go...*

The nose has a left and a right side. We use both to inhale and exhale. Actually they are different. You'll be able to feel the difference.

The right side represents the sun. The left side represents the moon.

During a headache, try to close your right nose and use your left nose to breathe.
In about 5 mins, your headache will go.

If you feel tired, just reverse, close your left nose and breathe through your right nose. After a while, you will feel your mind is refreshed.

Right side belongs to 'hot', so it gets heated up easily. Left side belongs to 'cold'.

Most females breathe with their left noses, so they get "cooled off" faster.  Most of the guys breathe with their right noses, they get worked up.

Do you notice, the moment you awake, which side breathes better?
Left or right ?
If left is better, you will feel tired. So, close your left nose and use your right nose for breathing. You will feel refreshed quickly.

*Do you suffer from continual headaches?*
Try out this breathing therapy.

Close your right nose and breathe through your left nose. Your headaches will be gone. Continued the exercise for one month.

Why not give it a try.... a natural therapy without medication.

*CURE FOR ACIDITY*

Acidity, it is said, is worse than Cancer. It is one of the most common disease people encounter in their daily life. The home remedy for Acidity is Raw Grains of Rice.

The Process:
1. Take 8 - 10 grains of raw uncooked rice

2. Swallow it with water before having your breakfast or eating anything in the morning

3. Do this for 21 days to see effective results and continuously for 3 months to eliminate acidity from the body

*The Cure:*
Reduces acid levels in the body and makes you feel better by the day.

*CURE FOR CHOLESTEROL*
Cholesterol problem accompanies with Hypertension and Heart Problems. This is also one of the common problems in people who have High Blood Pressure and Diabetes. The home remedy for Cholesterol problem is RAW SUPARI.

*The Process:*
1. Take Raw Supari (Betel Nut that is not flavoured) and slice them or make pieces of the same.
2.  Chew it for about 20 - 40 minutes after every meal.
3. Spit it out.

*The Cure:*
When you chew the supari, the saliva takes in the juice that is generated and this acts like a Blood Thinner. Once your blood becomes free flowing, it brings down the pressure in the blood flow, thereby reducing Blood Pressure too. 

*CURE FOR BLOOD PRESSURE:*
One of the simple home remedy cure for Blood Pressure is Methi Seeds or Fenugreek Seeds.

*The Process:*
1. Take a pinch of Raw Fenugreek Seeds, about 8 - 10 seeds.
2. Swallow it with water before taking your breakfast, every morning.

*The Cure:*
The seeds of Fenugreek are considered good to reduce the blood pressure.

*CURE FOR DIABETES*
There are 2 home remedies for Diabetes. One is Ladies Finger and the other is Black Tea.

*BLACK TEA:* Due to high medication, the organ that is worst affeccted is the Kidney. It has been observed that Black Tea (tea without milk, sugar or lemon) is good for the Kidney. Hence a cup of black tea every morning is highly advisable.

*The Process:*
1. Boil water along with the tea leaves (any tea leaves will do).
2. Drink the concoction without addingmilk, sugar or lemon.

*The Cure:*
Black Tea will help in enhancing the function of the kidney, thereby not affecting it more.

*LADIES FINGER or OKRA:*
Ladies finger is considered to be a good home medicine for diabetes.

*The Process:*
1. Slit the ladies finger into 2 halves vertically and soak it in water overnight.
2. The next morning, remove the ladies fingers and drink the water, before eating your breakfast.

*The Cure:*
After the ladies fingers are soaked overnight in the water, you can observe that the water becomes sticky in the morning. This sticky water is considered to be good for people who suffer from Diabetes.

*Pass it on...*
*Many people may benefit from this...*

Friday, 22 June 2018

ಮರಣ ಕಾಲದಲ್ಲಿ ಯಾವ ಯೋಚನೆಗಳು ಬರ ಬಹುದು?

ಇದೊಂದು ನಂಬಲಾರದಂತಹ ವಿಚಾರ. ಆದರೆ ನಮ್ಮ ಪುರಾತನ ಋಷಿಗಳು ಭೂತ ವರ್ತಮಾನ ಭವಿಷ್ಯಗಳನ್ನು ಬಲ್ಲಂತಹ ತ್ರಿಕಾಲ ಜ್ಞಾನಿಗಳು ಅಲ್ಲವೇ?

ಅವರು ನಡೆಸಿದ ಸಂಶೋಧನೆಗಿಂತ ಮಿಗಿಲು ಯಾವುದೂ ಇಲ್ಲ. ಕೇವಲ ನಾವಿಂದು ಅದನ್ನು ಆ ಸಂಶೋಧನೆಗಳನ್ನು ಹುಡುಕಿ ಇಂದಿನ ವ್ಯಾವಹಾರಿಕತೆಗೆ ಹೊಂದುವಂತೆ ಬರೆಯ ಬಹುದಷ್ಟೆ. ಮನುಷ್ಯನು ತನ್ನ ಕೊನೆಯುಸಿರಿನ ಕಾಲದಲ್ಲಿ ಏನು ಯೋಚಿಸಿರುವನು? ಇದನ್ನು ಹೇಳಲಿಕ್ಕೆ ಆ ಮನುಷ್ಯನು ಇರುವುದಿಲ್ಲ. ಮರಣಕ್ಕೆ ಕೆಲ ಗಳಿಗೆಗೆ ಮುಂಚೆ ಕೆಲವರು ಅವರ ಮನದ ಇಂಗಿತಗಳನ್ನು ಹೇಳಿದ್ದಿದೆ.
ಆದರೆ ಕೊನೆಯ ಉಸಿರಿನಲ್ಲಿ ಇರುವಾಗ ಮನದ ಯೋಚನೆಗಳು ಏನಿರ ಬಹುದು ಎಂದು ಯೋಚಿಸಿದವರಿಲ್ಲ. ಇಲ್ಲಿ ನಾಲ್ಕು ವಿಧಗಳ ಚಿಂತನೆಗಳಿವೆ. ಆರ್ತ, ರೌದ್ರ, ಧನ್ಯ ಮತ್ತು ಶುಕ್ಲ. ಇವುಗಳಲ್ಲಿ ಯಾವುದಾದರೂ ಒಂದು ಚಿಂತನೆ ಬರಲೇ ಬೇಕು ಎಂಬುದು ಮರಣ ಕಾಲದ ಸಿದ್ಧಾಂತ.

ಆರ್ತ-ಹೆಸರೇ ಹೇಳುತ್ತದೆ ಆರ್ತ ನಾದ ಎಂದು. ಅಯ್ಯೋ ನನ್ನ ಮಕ್ಕಳು, ನನ್ನ ಹೆಂಡತಿ, ನನ್ನ ಆಸ್ತಿ ಎಲ್ಲಾ ಬಿಟ್ಟು ಹೋಗ ಬೇಕಲ್ಲಾ ಎಂಬ ದುಃಖ ಬರುತ್ತದೆ. ನೀವು ನೋಡಿರ ಬಹುದು ಕೆಲ ಮನುಷ್ಯರು ಮರಣ ಕಾಲಕ್ಕೆ ಸದಾ ಅಳುವವರನ್ನು. ಅಂದರೆ ಇವರಿಗೆ ಈ ಲೋಕದ ವ್ಯಾಮೋಹವನ್ನು ತುಂಡು ಮಾಡಿ ಹೋಗಲು ಆಗುತ್ತಿಲ್ಲ. ಆ ಕಡೆಯಿಂದ ಯಮ ಪಾಶ ಎಳೆಯುತ್ತದೆ. ಹಾಗಾಗಿ ದುಃಖಿಸುತ್ತಾರೆ. ಆಗ ಅವರ ಮಕ್ಕಳು ‘ಅಪ್ಪಾ, ಅಜ್ಜಾ, ಅಮ್ಮಾ. ನಿನಗೆ ಏನು ಆಸೆ ಇದೆ ಹೇಳು ‘ ಎಂದು ಸಾಂತ್ವನ ಹೇಳುತ್ತಾರೆ. ಅಂತೂ ಕೊನೆಗೆ ಕ್ಷೀಣವಾಗಿ ಆತ ಇಹಲೋಕವನ್ನು ಒತ್ತಾಯ ಪೂರ್ವಕ ತ್ಯಜಿಸ ಬೇಕಾಗುತ್ತದೆ. ಇದನ್ನು ಆರ್ತ ಮರಣ ಎಂದಿದ್ದಾರೆ. ‘ಯಥಾ ಮರಣ ಸ್ವರೂಪಂ ತಥಾ ಪುನರ್ಜಃನ್ಮಃ’ ಅಂದರೆ ಯಾವ ಚಿಂತೆಯಲ್ಲಿ ಸಾಯುತ್ತಾನೋ ಅದೇ ಸ್ವರೂಪದ ಪುನರ್ಜನ್ಮ ಲಭಿಸುತ್ತದೆ. ಈ ರೀತಿಯಲ್ಲಿ ಹುಟ್ಟಿದವರು ಮುಂದಿನ ಜನ್ಮದಲ್ಲಿ ಹೇಗಿರುತ್ತಾನೆ ಎಂಬುದು ನವಜಾತ ಶಿಶುವಿನ ಅಳುವು ಸೂಚಿಸುತ್ತದೆ. ನವಜಾತ ಶಿಶುವು ವಿಪರೀತ ಅಳುವುದು ಈ ಸಂಬಂಧದಿಂದ. ಇದೊಂದು ರೀತಿಯ ಮಾನವನ ಮನಶಾಸ್ತ್ರದ. ಕಲಿಕೆಯಂತೆ. ಈ ವ್ಯಕ್ತಿ ಜೀವನದಲ್ಲಿ ಜಿಪುಣ, ದುಃಖಿತನಾಗಿ ಬಾಳುತ್ತಾನೆ. ಅದರೆ ಉತ್ತಮ ಸಂಯೋಜಕರಿದ್ದರೆ ಇದನ್ನು ಸರಿ ಮಾಡಲು ಸಾಧ್ಯವಿದೆ. ಅದಕ್ಕಾಗಿ ವಿದ್ವಜ್ಜನರ ಸಂಪರ್ಕ ಬೇಕು ಎನ್ನುವುದು.

ರೌದ್ರ: ನೀವು ಕೆಲ ಮನುಷ್ಯರು ಆಡುವ ಮಾತುಗಳನ್ನು ಕೇಳಿರ ಬಹುದು. 'ನಾನು ಸತ್ತರೂ ನನ್ನ ಹೆಣ ಮುಟ್ಟ ಬೇಡ, ನಾನು ಸತ್ತರೂ ದೆವ್ವವಾಗಿ ನಿನ್ನನ್ನು ಬಿಡುವುದಿಲ್ಲ, ನನ್ನ ಚಿತೆಗೆ ಹಿರಿ ಮಗ ಕೊಳ್ಳಿ ಇಡುವುದು ಬೇಡ, ನಾನು ಸತ್ತರೆ ನೀನು ನನ್ನ ಅಂತ್ಯ ವಿಧಿ ಮಾಡ ಬೇಡ', ಇತ್ಯಾದಿ ಮಾತಾಡುವವರಿಗೆ ರೌದ್ರ ಚಿಂತನೆ ಮರಣವಿರುತ್ತದೆ. ಇವರ ಮುಂದಿನ ಜನ್ಮ ಕಲಹ ಸ್ವರೂಪದಲ್ಲಿ ಇರುತ್ತದೆ. ಇಂತವರ ಪುನರ್ಜನ್ಮದಲ್ಲಿ ಶಿಶುವಿನಿಂದಲೇ ಈ ಗುಣ ತಿಳಿಯ ಬಹುದು. ವಿಪರೀತ ಹಟ ಮಾಡುವಿಕೆ, ಕೋಪದಿಂದ ಮಗುವಿನ ಮುಖದ ವರ್ಣವೇ ಬದಲಾಗುವುದು, ಹಾಲಿನ ಬಾಟಲಿಯನ್ನು ಎಳೆದು ಬಿಸಾಡುವಿಕೆ, ಕೆಲ ಜನರನ್ನು ಕಂಡರೆ ಅಳುವುದು ಇತ್ಯಾದಿ ಗುಣಗಳಿರುತ್ತದೆ. ಇಂತಹ ಗುಣವುಳ್ಳ ಮಗುವನ್ನು ಅದರ ಮಾತಾ ಪಿತೃಗಳು ಒಳ್ಳೆಯ ಪೋಲೀಸ್ ಅಧಿಕಾರಿಯೋ, IAS ಅಧಿಕಾರಿಯನ್ನೋ ಮಾಡಿದಾಗ ಈ ಮನ ಪರಿವರ್ತನೆಯಾಗಿ ಆತ ಒಬ್ಬ ನಿಷ್ಟಾವಂತ ಮನುಷ್ಯನಾಗ ಬಹುದು. ಇಲ್ಲವಾದಲ್ಲಿ ಮತ್ತೆ ಪಾಪಿಯೇ ಆಗ ಬಹುದು.

ಧನ್ಯ: ಈ ವ್ಯಕ್ತಿಯು ಜೀವನದಲ್ಲಿ ಸದಾ ಸಜ್ಜನಿಕೆಯುಳ್ಳವನೆ. ಇವನು ತನ್ನ ಕೊನೆಯ ಕಾಲದಲ್ಲಿ, 'ನಾನು ಯಾರಿಗೂ ಅನ್ಯಾಯ ಮಾಡಿಲ್ಲ, ಅನೇಕ ಜನರಿಗೆ, ಸಂಘ ಸಂಸ್ಥೆಗಳಿಗೆ ದಾನ ಮಾಡಿದ್ದೇನೆ, ಯಾರನ್ನೂ ದೂಷಿಸಿಲ್ಲ, ಒಟ್ಟಿನಲ್ಲಿ ಸತ್ಯದಲ್ಲೇ ನಡೆದಿದ್ದೇನೆ ಎಂದು ಯೋಚಿಸುತ್ತಾ ಜೀವ ಬಿಡುತ್ತಾನೆ. ಇದು ಧನ್ಯ ಚಿಂತನಾ ಮರಣ. ಮುಂದಿನ ಜನ್ಮದಲ್ಲಿ ಸಾತ್ವಿಕನೂ ಶ್ರೀಮಂತನೂ, ದಾನಿಯೂ ಆಗಿ ಹುಟ್ಟುತ್ತಾನೆ. ಇವನು ಮಗುವಿದ್ದಾಗಲೂ ಯಾರಿಗೂ ಹಿಂಸೆ ನೀಡುವುದಿಲ್ಲ. ನೀವು ಕೆಲ ತಾಯಂದಿರ ಮಾತು ಕೇಳಿರ ಬಹುದು. ನನ್ನ ದೊಡ್ಡ ಮಗ ಶಿಶುವಾಗಿದ್ದಾಗ ರಗಳೆಯೇ ಇಲ್ಲ. ಹಾಲು ಕೊಟ್ಟು ಮಲಗಿಸಿದರೆ ಅವನಷ್ಟಕ್ಕೇ ಆಟವಾಡಿ ಕೊಂಡು ಇರುತ್ತಾನೆ. ಅಳುವುದು ಬಾರೀ ಕಡಿಮೆ. ಅಂತೂ ಇವನ ಬಾಲ್ಯದಲ್ಲಿ ನನಗೇನೂ ರಗಳೆಯಾಗಲಿಲ್ಲಪ್ಪ’ ಎಂದು ಮಗುವಿನ ಬಗ್ಗೆ ಗುಣಗಾನ ಮಾಡುತ್ತಾಳೆ. ಇದು ಧನ್ಯ ಚಿಂತನೆಯಲ್ಲಿ ಮರಣಿಸಿದವನ ಪುನರ್ಜನ್ಮದ ರೂಪ.

ಶುಕ್ಲ : ಈ ಮರಣ ಬರುವುದು ಅಪರೂಪ. ಕಲಿಯುಗದಲ್ಲಂತೂ ಲಕ್ಷಕ್ಕೆ ಒಬ್ಬ ಮಾತ್ರ ಎನ್ನ ಬಹುದು. ಇದು ಹೇಗೆಂದರೆ ಇವರ ಮರಣ ಕಾಲದಲ್ಲಿ ಅವರ ಕ್ರಿಯಾ ಉದ್ದೇಶ ಚಿಂತನೆ, ತಾನು ಏನು ಮಾಡಿದ್ದೇನೆ ಎಂಬುದರ ಮೆಲುಕು ಇವರಲ್ಲಿ ಇಲ್ಲ. ಉದಾ: ಮಾಜಿ ರಾಷ್ಟ್ರಪತಿ ಕಲಾಂ ಮೇಷ್ಟ್ರು, ಯಕ್ಷಗಾನ ವೇಷಧಾರಿಯಾದ ಕೆರೆಮನೆ ಶಂಬು ಹೆಗ್ಗಡೆ, ಯಕ್ಷಗಾನ ಭಾಗವತರಾದ ದಾಮೋದರ ಮಂಡೆಚ್ಚರು, ಮಹಾತ್ಮಾ ಗಾಂಧೀಜಿ, ಹೋರಾಟದಲ್ಲೇ ಮಡಿಯುವ ಯೋಧರು ಇತ್ಯಾದಿ ತನ್ನ ಉದ್ದೇಶಿತ ಕೆಲಸದ ಮಧ್ಯದಲ್ಲೇ ಅಸು ನೀಗುವವರು. ಅವರಿಗೆ ಗತ ಕಾಲದ ಚಿಂತನೆಗಳಿಲ್ಲ. ಆ ಕಾಲದ ವಿಚಾರ ಮಾತ್ರವೇ ಇರುತ್ತದೆ.ಇನ್ನು ಕೆಲ ಜ್ಞಾನಿಗಳೂ ಶುಕ್ಲ ಚಿಂತನೆಯಲ್ಲಿ ಕೊನೆಗೊಳ್ಳುತ್ತಾರೆ. ಇವರು, ನಾನು ಏನೂ ಮಾಡಲಿಲ್ಲವಪ್ಪಾ, ಎಲ್ಲಾ ದೈವ ಪ್ರೇರಣೆಯಂತೆ ನನ್ನ ಮೂಲಕ ನಡೆದಿರ ಬಹುದು ನಾನು ಕೇವಲ ನಿಮಿತ್ತ ಮಾತ್ರ ಎಂದು ಯೋಚಿಸುವವರು. ಇವರು ತಪ್ಪಿಯೂ ನನಗೆ ಮೋಕ್ಷ ಸಿಗಲಿ ಎಂದು ಬಯಸುವವರಲ್ಲ.
ಇಂತವರಿಗೆ ಮೋಕ್ಷ ಯೋಗವಿರುತ್ತದೆ. ಆತ್ಮಕಾರಕ ಶುಭಗ್ರಹ ಮೀನಾಂಶದಲ್ಲಿ ಬಂದವರಿಗೆ ನಿಶ್ಚಿತವಾಗಿಯೂ ಮೋಕ್ಷ ಯೋಗವಿದೆ. ಇಂತವರಿಗೆ ಮರು ಹುಟ್ಟಿಲ್ಲ. ಆದರೆ ಇವರು ಆರ್ತ, ರೌದ್ರ, ಧನ್ಯ ಮರಣಗಳನ್ನು ದಾಟಿಯೇ ಬರ ಬೇಕು. ಇದು ಒಂದು ರೀತಿಯ ವಿಕಾಸ. 'ಅಯೋಗ್ಯ ಪುರುಷಂ ನಾಸ್ತಿ’ ಎಂದು ವೇದಗಳು ಹೇಳಿವೆ. ಆದರೆ ಸಂಯೋಜಕರು ಸರಿ ಇರ ಬೇಕು. ಅದು ಸರಿ ಇಲ್ಲದಿದ್ದಾಗ ಅಯೋಗ್ಯರಾಗ ಬಹುದು. ಅದಕ್ಕಾಗಿಯೇ ಪೂರ್ವ ಶೋಡಶ ಸಂಸ್ಕಾರಗಳಿರುವುದು.ಅದರ ಉದ್ದೇಶ ತಿಳಿಯದೆ ಸಂಸ್ಕಾರ ಪಡೆದರೂ ಪ್ರಯೋಜನವಿಲ್ಲ. ಅರ್ಥ ತಿಳಿದರೆ ಅವನಿಗೆ ಹಂತ ಹಂತಗಳಲ್ಲಿ ಜ್ಞಾನವೃದ್ಧಿ ಆಗುತ್ತದೆ. ಜ್ಞಾನಿಗೆ ದುಃಖ ಸುಳಿಯದು. ದುಃಖ ರಹಿತನಿಗೆ ಶುಕ್ಲ ರೂಪದ ಮರಣವೂ ಮೋಕ್ಷವೂ ಲಭ್ಯವಾಗುತ್ತದೆ.
ಎಲ್ಲರಿಗೂ ಶುಭವಾಗಲಿ.

Saturday, 16 June 2018

ಒಂದು ಬಾರಿ ಸ್ಮರಣೆ ಸಾಲದೆ

ಕೀರ್ತನಕಾರರು : ವಾದಿರಾಜರು
ರಾಗ : ಪಂತುವರಾಳಿ
ತಾಳ : ರೂಪಕ

ಒಂದು ಬಾರಿ ಸ್ಮರಣೆ ಸಾಲದೆ ಆ-
ನಂದ ತೀರ್ಥರ ಪೂರ್ಣಪ್ರಜ್ಞರ ಸರ್ವಜ್ಞರಾಯರ ಮಧ್ವರಾಯರ    ।।ಪ।।

ಹಿಂದನೇಕ ಜನ್ಮಗಳಲಿ ನೊಂದು ಯೋನಿಯಲ್ಲಿ ಬಂದು
ಇಂದಿರೇಶ ಹರಿಯ ಪಾದವ ಹೊಂದಬೇಕೆಂಬುವರಿಗೆ                 ।।೧।।

ಪ್ರಕೃತಿಬಂಧದಲಿ ಸಿಲುಕಿ ಸಕಲ ವಿಷಯಗಳಲಿ ನೊಂದು
ಅಕಳಂಕ ಚರಿತ ಹರಿಯ ಪಾದಭಕುತಿ ಬೇಕೆಂಬುವರಿಗೆ             ।।೨।।

ಆರುಮಂದಿ ವೈರಿಗಳನು ಸೇರಿಸಲೀಯದಂತೆ ಜರಿದು
ಧೀರನಾಗಿ ಹರಿಯ ಪಾದವ ಸೇರಬೇಕೆಂಬುವರಿಗೆ                      ।।೩।।

ಘೋರಸಂಸಾರಾಂಬುಧಿಗೆ ಪರಮಜ್ಞಾನವೆಂಬ ವಾಡೆ
ಏರಿ ಮೆಲ್ಲನೆ ಹರಿಯಪಾದ ಸೇರಬೇಕೆಂಬುವರಿಗೆ                       ।।೪।।

ಹೀನಬುದ್ಧಿಯಿಂದ ಶ್ರೀಹಯವದನನ ಜರಿದು
ತಾನು ಬದುಕಲರಿಯದಿರಲು ತೋರಿಕೊಟ್ಟ ಮಧ್ವಮುನಿಯ          ।।೫।।