Monday, 21 January 2019

ಸಿದ್ದಗಂಗ ಶ್ರೀಗಳು ಬರೆದಿರುವ ಒಂದು ಕವಿತೆ*

ಸಾಧ್ಯವಾದರೆ ಓಡು
ಆಗಲಿಲ್ಲವಾದರೆ ನಡೆ
ಅದೂ ಸಾಧ್ಯವಾಗದಿರೆ
ಉರುಳಿ ಕೊಂಡು ಹೋಗು ಅಷ್ಟೇ!

ಆದರೆ ಕದಲದೇ
ಬಿದ್ದಿರಬೇಡ ಒಂದೇ ಕಡೆ

ಕೆಲಸ ಸಿಗಲಿಲ್ಲವೆಂದು,
ವ್ಯಾಪಾರ ನಷ್ಟವಾಯಿತೆಂದು
ಗೆಳೆಯನೊಬ್ಬ ಮೋಸಮಾಡಿದನೆಂದು,
ಪ್ರೀತಿಸಿದವಳು
ಕೈಬಿಟ್ಟಳೆಂದು!!

ಹಾಗೆ ಇದ್ದರೆ ಹೇಗೆ..?
ದಾಹಕ್ಕೆ ಬಾರದ
ಸಮುದ್ರದ ಅಲೆಗಳು ಕೂಡಾ
ಕುಣಿದು ಕುಪ್ಪಳಿಸುತ್ತವೆ ನೋಡು!

ಮನಸು ಮಾಡಿದರೇ...
ನಿನ್ನ ಹಣೆಬರಹ ಇಷ್ಟೇ
ಅಂದವರೂ ಸಹ...
ನಿನ್ನ ಮುಂದೆ ತಲೆ ತಗ್ಗಿಸುವ
ತಾಕತ್ತು ನಿನ್ನಲ್ಲಿದೆ

ಅಂತದ್ದರಲ್ಲಿ ಈ ಪುಟ್ಟ ಕಷ್ಟ ಕೋಟಲೆಗೆ ತಲೆ ಬಾಗಿದರೆ ಹೇಗೆ?

ಸೃಷ್ಟಿ ಚಲನಶೀಲ
ಯಾವುದೂ ನಿಲ್ಲಬಾರದು

ಹರಿಯುವ ನದಿ
ಬೀಸುವ ಗಾಳಿ
ತೂಗುವ ಮರ
ಹುಟ್ಟೋ ಸೂರ್ಯ
ಅಂದುಕೊಂಡಿದ್ದನ್ನು ಸಾಧಿಸಬೇಕೆಂದು
ನಿನ್ನಲ್ಲಿ ಛಲದಿಂದ ಹರಿಯುವ ರುಧಿರ ಸಹ

ಯಾವುದೂ  ನಿಲ್ಲಬಾರದು.
ಏಳು... ಎದ್ದೇಳು
ಹೊರಡು...
ನಿನ್ನನ್ನು ಅಲಗಾಡದಂತೆ
ಮಾಡಿದ ಆ ಮಾನಸಿಕ ‌ಸಂಕೋಲೆಗಳನ್ನು ಬೇಧಿಸು,
ಬಿದ್ದ ಜಾಗದಿಂದಲೇ
ಓಟ ಶುರು ಮಾಡು

ನೀನು ಮಲಗಿದ ಹಾಸಿಗೆ
ನಿನ್ನನ್ನು ಅಹಸ್ಯಪಡುವ ಮುನ್ನ
ಅಲಸ್ಯವನ್ನು ಬಿಡು

ಕನ್ನಡಿ ನಿನ್ನನ್ನು ಪ್ರಶ್ನಿಸುವ
ಮುನ್ನ ಉತ್ತರ ಹುಡುಕು

ನೆರಳು ನಿನ್ನನ್ನು ಬಿಡುವ
ಮುನ್ನ ಬೆಳಕಿಗೆ ಬಾ

ಮತ್ತೆ ಹೇಳುತ್ತಿದ್ದೇನೆ...
ಕಣ್ಣೀರು ಸುರಿಸುವುದರಿಂದ
ಅದು ಸಾಧ್ಯವಿಲ್ಲ!
ಬೆವರು ಸುರಿಸುವುದರಿಂದ
ಮಾತ್ರ ಚರಿತ್ರೆ
ಸೃಷ್ಟಿಸಬಹುದೆಂದು
ತಿಳಿದುಕೋ...

ಓದಿದರೆ ಇವು ಪದಗಳಷ್ಟೇ...
ಆದರೆ ಆಚರಿಸಿದಾಗ
ಅಸ್ತ್ರಗಳು..!!!!!
ಮಹಾ ಶಸ್ತ್ರಗಳು!!!!!!!

*ಯಾರು ನಮ್ಮ ಶ್ರಮವನ್ನು ಗಮನಿಸುವುದಿಲ್ಲ..*
*ಯಾರು ನಮ್ಮ ನ್ಯಾಯವನ್ನು ಗಮನಿಸುವುದಿಲ್ಲ...*
*ಯಾರು ನಮ್ಮ ನೋವನ್ನು ಗಮನಿಸುವುದಿಲ್ಲ...*
                  *ಆದರೆ*
*"ಎಲ್ಲರೂ ನಾವು ಮಾಡುವ ತಪ್ಪನ್ನು ಗಮನಿಸುತ್ತಾರೆ
                *ಎಚ್ಚರ*💐💐💐

No comments:

Post a Comment

TOP 10

  Top 10 Sites for your career 1. Linkedin 2. Indeed 3. Naukri 4. Monster 5. JobBait 6. Careercloud 7. Dice 8. CareerBuilder 9. Jibberjobber...